ಕೊಳ್ಳೇಗಾಲ. ಕ್ರೆಡಿಟ್ ಅಕ್ಸಿಸ್ ಗ್ರಾಮೀಣ ಲಿಮಿಟೆಡ್ ಕೊಳ್ಳೇಗಾಲ ಶಾಖೆಯ ವತಿಯಿಂದ ಸಾಮಾಜಿಕ ಆರ್ಥಿಕ ಅಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು.
ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು ನಡೆದ ಕಾರ್ಯಾಗಾರವನ್ನು ಡಿವೈಎಸ್ಪಿ ಮೋಹನ್.ಜೆ ಅವರು ಉದ್ಘಾಟನೆ ಮಾಡಿ ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಆರ್ಥಿಕ ಸಬಲೀಕರಣ ಪ್ರಮುಖ ಪಾತ್ರ ವಹಿಸುತ್ತದೆ. ಅದರೊಂದಿಗೆ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಯೂ ಅಗತ್ಯವಾಗಿದ್ದು, ಇಂತಹ ಕಾರ್ಯಾಗಾರಗಳು ಜನರಲ್ಲಿ ಅರಿವು ಮೂಡಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನೆರವಾಗುತ್ತವೆ ಎಂದು ಹೇಳಿದರು.
ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವ ಜೊತೆಗೆ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು. ಮಹಿಳೆಯರು ಮತ್ತು ಗ್ರಾಮೀಣ ಜನತೆ ಆರ್ಥಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಪಾಲ್ಗೊಳ್ಳುವಿಕೆ ಹೊಂದಿದಾಗ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

 ಸಮುದಾಯ ಆರೋಗ್ಯ ಅಧಿಕಾರಿ ವರದರಾಜು ಆರೋಗ್ಯದ ಮಹತ್ವ, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ, ಪೌಷ್ಟಿಕ ಆಹಾರ ಸೇವನೆ ಮತ್ತು ಸ್ವಚ್ಛತೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಪ್ರಾಥಮಿಕ ಆರೋಗ್ಯ ಅಧಿಕಾರಿ ಅಂಜಲಿ, ಗ್ರಾಮೀಣ ಲಿಮಿಟೆಡ್ ಪ್ರಾದೇಶಿಕ ವ್ಯವಸ್ಥಾಪಕರು ಮುತ್ತುರಾಜು, ವಲಯ ವ್ಯವಸ್ಥಾಪಕರು ಕೃಷ್ಣ.ಎಂ.ಸಿ, ಸಂದೇಶ, ಸುರೇಶ್, ಕಿರಣ್, ಅಶ್ವಥ್, ಉಮೇಶ್, ಸೋಮೇಶ್, ರಂಗರಾಜು, ಮಾದೇಶ್, ಶಾಖೆಯ ಸಿಬ್ಬಂದಿ ವರ್ಗದವರು ಇದ್ದರು.

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.