ಬೆಂಗಳೂರು:ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಬಸವನಗುಡಿ ಬಿ.ಪಿ.ವಾಡಿಯ ಸಭಾಂಗಣದಲ್ಲಿ 240 ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ವಿತರಣೆ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ, ಶೈಕ್ಷಣಿಕ ವಿಷಯ ಸ್ಪರ್ಧೆಯಲ್ಲಿ ವಿಜೇತರಾದ ಬಾಲಕಿಯರಿಗೆ ಸನ್ಮಾನ ಮತ್ತು ವೆಬ್ ಸೈಟ್ ಬಿಡುಗಡೆ ಕಾರ್ಯಕ್ರಮ
ಶಾಸಕರಾದ ಉದಯ್ ಗರುಡಾಚಾರ್, ರಾಜ್ಯಾಧ್ಯಕ್ಷರಾದ ಸಿ.ಎನ್.ಅಶೋಕ್, ಬೆಂಗಳೂರು ಘಟಕದ ಅಧ್ಯಕ್ಷರಾದ ಡಾ||ಭೂಪಾಳಂ ಸುನೀಲ್, ಪ್ರಧಾನ ಕಾರ್ಯದರ್ಶಿ ಹೆಚ್.ವಿ.ಸಿದ್ದೇಶ್, ಸಂಘಟನಾ ಕಾರ್ಯದರ್ಶಿ ಸಚ್ಚಿನ್, ಹಣಕಾಸು ಸಲಹೆಗಾರರಾದ ಸಂದೀಪ್ ಎನ್.ಶೆಟ್ಟಿ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಮಲಕಪ್ಪ ಮಹೇಶ್ ರವರು ವಿತರಿಸಿದರು. .
ಮಕ್ಕಳ ಶಿಕ್ಷಣ, ಆರೋಗ್ಯ, ಪರಿಸರ, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಕ್ಕಳಿಗೆ ಉತ್ತೇಜನಾ ಹಾಗೂ ಸಹಕಾರ ನೀಡುತ್ತಿದೆ.
ಬೆಂಗಳೂರಿನ ಬಸವನಗುಡಿ ರೋಟರಿ ಕ್ಲಬ್ ಅಧ್ಯಕ್ಷರಾದ ನವಾಜ್ ಪಾಷ,ಕಾರ್ಯದರ್ಶಿ ಕವಿತಾ ಮುರಳಿ, ಖಜಾಂಜಿ ಶಂಕರ್ ಸಂಕೇತ್ ಹಾಗೂ ಅಶೋಕ್ ಪಿ ಭೂಪಳಂ ರವರು ಉಪಸ್ಥಿತರಿದ್ದರು.
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.