ಕೊಳ್ಳೇಗಾಲ: ಕೊಳ್ಳೇಗಾಲ ಕೃಷಿ ಇಲಾಖೆಯ ಕೃಷಿ ಅಧಿಕಾರಿ ನಾಗೇಂದ್ರ ಅವರ ಮೇಲೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹಲ್ಲೆ ಯತ್ನ ನಡೆಸಿರುವ ಚೇತನ್ ಕುಮಾರ್ ಎಂಬಾತನ ಮೇಲೆ ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದೆ.

ಕೃಷಿ ಅಧಿಕಾರಿ ನಾಗೇಂದ್ರ ಅವರು ನಡೆದ ಘಟನೆ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅವರಿಗೆ ಪತ್ರ ಬರೆದು ನಂತರ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಚೇತನ್ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.

ಇದೇ ತಿಂಗಳು 8 ರಂದು ಕೊಳ್ಳೇಗಾಲ ಕೃಷಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯುತ್ತಿತ್ತು. ಲೊಕ್ಕನಹಳ್ಳಿ ಕೃಷಿ ಸಂಪರ್ಕ ಕೇಂದ್ರದಲ್ಲಿ 2021 ರಿಂದ 2025 ರ ವರೆಗಿನಿ ಕೃಷಿ ಪರಿಕರಗಳ ಬಾಕಿ ಬಗ್ಗೆ ಚರ್ಚೆ ನಡೆಯುತ್ತಿತ್ತು.

ಸಭೆಯಲ್ಲಿ ಕೃಷಿ ಅಧಿಕಾರಿ ನಾಗೇಂದ್ರ ಸಹ ಭಾಗವಹಿಸಿದ್ದರು. ಇದೇ ಸಭೆಯಲ್ಲಿ ಹಾಜರಿದ್ದ ಚೇತನ್ ಕುಮಾರ್ ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರದ ವಿಚಾರ ಪ್ರಸ್ತಾಪ ಆಗುತ್ತಿದ್ದಂತೆ. ಕೆರಳಿ ಕೃಷಿ ಅಧಿಕಾರಿ ನಾಗೇಂದ್ರ ಅವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಒಂದು ಹಂತದಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಕೃಷಿ ಅಧಿಕಾರಿ ನಾಗೇಂದ್ರ ಅವರ ಮೇಲೆ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ್ದಾನೆ. ನಡೆದ ಎಲ್ಲಾ ಘಟನೆ ಕಚೇರಿ ಸಿಸಿಟಿವಿ ಯಲ್ಲಿ ರೆಕಾರ್ಡ್ ಆಗಿದೆ.

ಚೇತನ್ ಅವರಿಂದ ಜೀವ ಬೆದರಿಕೆ ಇರುವ ಕಾರಣ ಕೃಷಿ ಅಧಿಕಾರಿ ನಾಗೇಂದ್ರ ಅವರು ಠಾಣೆಯಲ್ಲಿ ದೂರು ನೀಡಿದ್ದಾರೆ.

ಚೇತನ್ ಸಹ ಕೃಷಿ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರ ನಾಗಿ ಸೇವೆ ಸಲ್ಲಿಸುತ್ತಿದ್ದ. ಈತನ ಮೇಲೆ ಕೆಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಲಾಗಿತ್ತು. ಅಲ್ಲದೆ ಹಿಂದೊಮ್ಮೆ ಇದೇ ಕೃಷಿ ಅಧಿಕಾರಿ ನಾಗೇಂದ್ರ ಅವರ ಮೇಲೆ ಗಲಾಟೆ ಮಾಡಿದ್ದ ಕಾರಣ ಹನೂರು ಠಾಣೆಯಲ್ಲಿ ದೂರು ನೀಡಲಾಗಿತ್ತು.

ವರದಿ: ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.