ಹನೂರು ತಾಲೂಕಿನ ಬಂಡಳ್ಳಿ ಊರು ಕೆರೆಗೆ ಮಾನ್ಯ ಶಾಸಕರಾದ ಶ್ರೀ ಎಂ.ಆರ್.ಮಂಜುನಾಥ್ ಅವರು ಭೇಟಿ:ಕಾಮಗಾರಿ ವೀಕ್ಷಿಸಿ ಸೂಚನೆ

ಹನೂರು:ತಾಲೂಕಿನ ಬಂಡಳ್ಳಿ ಗ್ರಾಮದ ಕೆರೆಯಲ್ಲಿ ನಡೆಯುತ್ತಿರುವ ಊಳುತ್ತುವ ಕಾಮಗಾರಿಯನ್ನು ಶಾಸಕ ಎಂ.ಆರ್.ಮಂಜುನಾಥ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಮತ್ತು ಕಾಲಮಿತಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಕಾಮಗಾರಿಯನ್ನು ಅಚ್ಚುಕಟ್ಟಾಗಿ ಮತ್ತು ನಿಗದಿತ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈತರಿಗೆ ಅನುಕೂಲವಾಗುವಂತೆ ಕೆರೆಯ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಈ ಊಳುತ್ತುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಮಳೆಗಾಲಕ್ಕೂ ಮುನ್ನ ಕಾಮಗಾರಿ ಮುಗಿಸಬೇಕು. ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿಗೆ ಅವಕಾಶ ನೀಡಬಾರದು ಎಂದು ಶಾಸಕರು ತಿಳಿಸಿದರು.

ಇದಲ್ಲದೆ ಅಲಗಾಪುರ ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತಲಿನ 250 ಎಕರೆಗೂ ಅಧಿಕ ಕೃಷಿ ಭೂಮಿಗೆ ಅನುಕೂಲವಾಗಲಿದೆ. ಸ್ಥಳೀಯ ರೈತರ ಬಹುದಿನದ ಬೇಡಿಕೆಯಂತೆ ಈ ಕಾಮಗಾರಿ ಆರಂಭಿಸಲಾಗಿದ್ದು, ಪಾರದರ್ಶಕವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಸರ್ವೆ ಇಲಾಖೆಯ ಸೂಪರಿಡೆಂಟ್ ಕುಮಾರಸ್ವಾಮಿ,ಮಂಜೇಶ್ ಗೌಡ,ಜೇಸಿಮ್ ಪಾಷ,ಶಂಕರಪ್ಪ, ನಾಗಯ್ಯ, ಶ್ರೀನಿವಾಸ್ ಆಚಾರ್, ರಾಮಕೃಷ್ಣಪ್ಪ,ಚಿನ್ನವೆಂಕಟ್,  ಬಸರತ್, ತಸ್ಲೀಮ್, ತಿರುಪತಿ, ಗಿರೀಶ್, ಪ್ರಮೋದ್, ಆರ್ ಮಹೇಶ್, ರಾಹೀಲ್,ಮಂಜು, ಸುರೇಶ್,ಸೇರಿದಂತೆ ಇನ್ನಿತರರು ಇದ್ದರು...
ವರದಿ ನೂರುಲ್ಲಾ ಕೌದಳ್ಳಿ

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.