ಕೊಳ್ಳೇಗಾಲ: ಖಾಸಗಿ ಬಸ್ಸೊಂದು ಟಿವಿಎಸ್ ಮೊಪೆಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲ್ಲೂಕಿನ ಮಧುವನಹಳ್ಳಿ ಬೈಪಾಸ್ ರಸ್ತೆ ಹತ್ತಿರ ನಡೆದಿದೆ. 

ಕೊಳ್ಳೇಗಾಲ ಪಟ್ಟಣದ ನಿವಾಸಿ ದಾಕ್ಷಾಯಿಣಿ (39) ಮೃತಪಟ್ಟ ದುರ್ದೈವಿಯಾಗಿದ್ದು ಈಕೆ ಬೆಳಿಗ್ಗೆ ಎಂದಿನಂತೆ ಮಧುವನಹಳ್ಳಿ ಗ್ರಾಮದ ಹತ್ತಿರ ಇರುವ ಖಾಸಗಿ  ಕಾರ್ಖಾನೆಗೆ  ಕರ್ತವ್ಯ ನಿರ್ವಹಿಸಲು ತೆರಳುತ್ತಿದ್ದಾಗ ತಮಿಳುನಾಡು ಮೂಲದ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಬಸ್ ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಳ್ಳೇಗಾಲ ಶವಾಗಾರಕ್ಕೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.