ಚಾಮರಾಜನಗರದಲ್ಲಿ ಎರಡು ದಿನಗಳಿಂದ ನಡೆಯುತ್ತಿರುವ ವಿಶ್ವ ಬೌದ್ಧ ಮಹಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಪಾಲ್ಗೊಂಡಿದ್ದರು.
ಜನಸಾಗರದ ನಡುವೆ ಶನಿವಾರ ಮತ್ತು ಇಂದು ಭಾನುವಾರ ನಡೆಯುತ್ತಿರುವ ಬೌದ್ಧ ಸಮ್ಮೇಳನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಮ್ಮೇಳನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಚಾಮರಾಜನಗರ ಜಿಲ್ಲಾ ಕೇಂದ್ರ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಒಂದು ಬೌದ್ಧ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಾಲ್ಗೊಳ್ಳುವ ಮೂಲಕ ಬೌದ್ಧ ಸಮ್ಮೇಳನಕ್ಕೆ ಮತ್ತಷ್ಟು ಮೆರುಗು ತಂದರು .
ಇದರ ಜೊತೆ ಜೊತೆಗೆ ಚಾಮರಾಜನಗರಕ್ಕೆ ಯಾರೇ ಮುಖ್ಯಮಂತ್ರಿಗಳು ಕಾಲಿಟ್ಟರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಹಣೆಪಟ್ಟಿ ಹೋಗಲಾಡಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಸಮ್ಮೇಳನಕ್ಕೆ ಆಗಮಿಸುತ್ತಿದ್ದಂತೆ ನೆರೆದಿದ್ದ ಜನಸ್ತೋಮ ಅವರತ್ತ ಜೈಕಾರದ ಘೋಷಣೆಗಳನ್ನು ಕೂಗಿ ತಮ್ಮ ಅಭಿಮಾನ ತೋರಪಡಿಸಿಕೊಂಡರು .
ಹಾಗೆ ಜೈ ಭೀಮ್ ಜೈ ಭೀಮ್ ಘೋಷಣೆಗಳನ್ನು ಕೂಗುವ ಮೂಲಕ ಬೌದ್ಧ ಸಮ್ಮೇಳನದಲ್ಲಿ ಕಾರ್ಯಕ್ರಮ ಯಶಸ್ಸಿನ ಹಂತಕ್ಕೆ ತಲುಪುವಂತಾಯ್ತು.
ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು ಈ ಒಂದು ವಿಶ್ವ ಬೌದ್ಧ ಸಮ್ಮೇಳನ ಜವಾಬ್ದಾರಿ ವಹಿಸಿಕೊಳ್ಳುವ ಮೂಲಕ ಅಚ್ಚುಕಟ್ಟಾಗಿ ಶನಿವಾರ ಮತ್ತು ಭಾನುವಾರ ಎರಡು ದಿನಗಳಲ್ಲೂ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯುವಂತೆ ವ್ಯವಸ್ಥೆ ಮಾಡುವಲ್ಲಿ ಸಫಲರಾಗಿದ್ದಾರೆ
ಈ ಒಂದು ಬೌದ್ಧ ಸಮ್ಮೇಳನದಲ್ಲಿ ಚಾಮರಾಜನಗರ ಜಿಲ್ಲೆಯ ಹಳ್ಳಿ ಹಳ್ಳಿಗಳಿಂದಲೂ ಹಾಗೂ ರಾಜ್ಯದ ವಿವಿಧ ಮೂಲಗಳಿಂದ ಅಲ್ಲದೆ ದೇಶವಿದೇಶಗಳಿಂದ ಭೀಮ ಬಂಧುಗಳು ಹಾಗೂ ಬೌದ್ಧ ಅನುಯಾಯಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.