ಕೊಳ್ಳೇಗಾಲ/ಬೆಂಗಳೂರು - ರಾಜ್ಯದ ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಗುರುವಾರ ಚುನಾವಣೆ ನಡೆಯಲಿದ್ದು.ಇಂದು ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ಪಕ್ಷ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾಲ್ಕು ಸ್ಥಾನಗಳನ್ನು ಗೆಲ್ಲುವ ಸಂಖ್ಯಾಬಲ ಇದೆ. ಇದಲ್ಲದೆ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಇತ್ತ ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಬ್ಬರು ಅಭ್ಯರ್ಥಿಗಳು ಗೆಲ್ಲಬಹುದು. ಮತ್ತೆ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ.
ಇದರಿಂದ ಎರಡೂ ಪಕ್ಷಗಳಲ್ಲಿ ರಾಜಕೀಯ ಸಂಚಲನ ಉಂಟಾಗಿದೆ. ಕಾರಣ ಕಾಂಗ್ರೆಸ್ ನಾಲ್ಕು ಸ್ಥಾನದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಎರಡು ಸ್ಥಾನಗಳಲ್ಲಿ ಗೆಲ್ಲಬಹುದು. ಇನ್ನುಳಿದ ಒಂದು ಸ್ಥಾನವನ್ನು ಗೆಲ್ಲಲು ಎರಡು ಪಕ್ಷಗಳಿಗೆ ನಿರ್ದಿಷ್ಟ ಸಂಖ್ಯಾ ಬಲ ಇಲ್ಲ. ಇದರಿಂದ ಎರಡೂ ಪಕ್ಷಗಳ ಶಾಸಕರ ಹೆಚ್ಚುವರಿ ಮತಗಳನ್ನು ಯಾರು ಪಡೆಯುತ್ತಾರೋ ಅವರು ಗೆಲ್ಲುವ ಸಾದ್ಯತೆ ಇದೆ.
ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಇದೊಂದು ಅಗ್ನಿ ಪರೀಕ್ಷೆ ಎಂದೇ ಹೇಳಬಹುದು. ರಾಜಕೀಯ ಎದುರಾಳಿ ಕುಮಾರ್ ಸ್ವಾಮಿ ಅವರಿಗೂ ಪ್ರತಿಷ್ಠೆ ಆಗಿದೆ.
ಹನೂರು ಕ್ಷೇತ್ರದ ಶಾಸಕ ಮಂಜುನಾಥ್ ಮತ ಯಾರಿಗೆ - ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರ ಒಂದೊಂದು ಮತವೂ ಆಯಾ ಪಕ್ಷಗಳ ಹೆಚ್ಚುವರಿ ಅಭ್ಯರ್ಥಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.
ಹನೂರು ಕ್ಷೇತ್ರದ ಶಾಸಕ ಎಂ.ಆರ್.ಮಂಜುನಾಥ್ ಮತ ಯಾರಿಗೆ ?
ಜೆಡಿಎಸ್ ಪಕ್ಷದಿಂದ ಗೆದ್ದಿರುವ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಮೈತ್ರಿ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುತ್ತಾರೋ...ಅಥವಾ ಹನೂರು ಕ್ಷೇತ್ರದ ಅಭಿವೃದ್ಧಿಗೆ ಸುಮಾರು 450 ಕೋಟಿಗೂ ಹೆಚ್ಚು ಅನುದಾನ ನೀಡಿದ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತಾರೋ ಕುತೂಹಲ ಮೂಡಿಸಿದೆ.
ಕಳೆದ ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಔಪಚಾರಿಕ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ನಿಂಪುವಾರ್ತೆಗೆ ಲಭಿಸಿದೆ..
ಮತ್ತೊಂದೆಡೆ ನಿನ್ನೆ ಜೆಡಿಎಸ್ ಶಾಸಕರು ರೆಸಾರ್ಟ್ ನಲ್ಲಿ ಇದ್ದರೂ ಸಹ ಶಾಸಕ ಮಂಜುನಾಥ್ ಅವರು ಹನೂರು ಕ್ಷೇತ್ರದಲ್ಲಿ ಇದ್ದು ಮದುವೆ ಕಾರ್ಯಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ " ಶಿವನೇ ನಿನ್ನಾಟ ಬಲ್ಲವರ್ಯಾರ್ಯಾರೋ.." ಹಾಡು ಜನಪ್ರಿಯತೆ ಗಳಿಸಿದೆ. ಹಾಗೇ ಇವತ್ತಿನ ರಾಜಕೀಯ ವಿದ್ಯಾಮಾನಗಳಿಗೆ " ಮಂಜುನಾಥ ನಿನ್ನಾಟ ಬಲ್ಲವರ್ಯಾರ್ಯಾರೋ " ಎಂದು ಹೇಳಬಹುದಾಗಿದೆ
ವರದಿ - ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.