ಕೊಳ್ಳೇಗಾಲ: ಕೊಳ್ಳೇಗಾಲ ಹೊರ ವಲಯದ ಉತ್ರಂಬಳ್ಳಿ ಬಳಿ ಹಾದು ಹೋಗಿರುವ ಬೈಪಾಸ್ ಸೇತುವೆ ಇಂದು ಬೆಳಿಗ್ಗೆ ಕುಸಿತ ವಾಗಿದೆ. ವಾಹನಗಳ ಸಂಚಾರದ ವೇಳೆ ಈ ಅವಘಡ ಸಂಭವಿಸಿದೆ. ಈ ಘಟನೆಯಿಂದ ಜನರು ಭಯಭೀತರಾಗಿದ್ದಾರೆ. ಘಟನೆ ನಂತರ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ ‌ ವಿಷಯ ತಿಳಿಯುತ್ತಿದ್ದಂತೆಯೇ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.