ಕೊಳ್ಳೇಗಾಲ. ತಾಲ್ಲೂಕಿನ ಸತ್ತೇಗಾಲ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ರಾಜಗೋಪಾಲ್ ಹಾಗೂ ಉಪಾಧ್ಯಕ್ಷರಾಗಿ ದೊಡ್ಡಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.

ಸತ್ತೇಗಾಲ ಸೊಸೈಟಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಒಂದೊಂದು ನಾಮಪತ್ರ ಸಲ್ಲಿಕೆ ಯಾದ ಹಿನ್ನೆಲೆ ಅಧ್ಯಕ್ಷರು, ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಎಸ್.ನಾಗೇಶ್ ಅವರು ಘೋಷಣೆ ಮಾಡಿದರು.

ಬಳಿಕ ನೂತನ ಅಧ್ಯಕ್ಷ ರಾಜಗೋಪಾಲ್ ಮಾತನಾಡಿ, ಎಲ್ಲಾ ನಿರ್ದೇಶಕರ ಸಹಕಾರದಿಂದ ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ನನ್ನ ಆಯ್ಕೆಗೆ ಸಹಕರಿಸಿದ್ದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ನಮ್ಮ ಸೊಸೈಟಿಯನ್ನು ಹಿಂದೆ ಇದ್ದಂತೆ ಚಾ.ನಗರ ಜಿಲ್ಲೆಯಲ್ಲೇ ಮೊದಲ ಸ್ಥಾನ ಮಾಡುವ ಗುರಿ ಹೊಂದಿದ್ದೇನೆ. ಇದಕ್ಕೆ ಎಲ್ಲಾ ನಿರ್ದೇಶಕರು ಹಾಗೂ ರೈತರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ನಿರ್ದೇಶಕರುಗಳಾದ ಆರ್.ನವೀನ್ ಕುಮಾರ್, ಮಲ್ಲಿಕಾರ್ಜುನಸ್ವಾಮಿ, ಎಂ.ಶಂಕರೇಗೌಡ, ಮಂಜುಳಾ ಸುಜನ್, ಕಾಂತು, ಚೆಲುವನಾಯಕ, ಸೋಮಶೇಖರ್.ಜಿ ಹಾಗೂ ಬ್ಯಾಂಕ್ ಪ್ರತಿನಿಧಿ ಕುಮಾರ್ ಹಾಗೂ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಾಂಬಿಕಾ ಹಾಜರಿದ್ದರು. ಉಳಿದ ಮೂವರು ಭಾಸ್ಕರ್, ಮಲ್ಲೇಶ್, ಶಾಂತರಾಜು ಗೈರಾಗಿದ್ದರು.
ಬಳಿಕ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಆಯ್ಕೆಯಾದ ಹಿನ್ನೆಲೆ ಇಲ್ಲಿನ ನಿರ್ದೇಶಕರು ಹಾಗೂ ಗ್ರಾಮಸ್ಥರು ಹಾರ ಹಾಕುವ ಸನ್ಮಾನಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿ ಹರ್ಷ ವ್ಯಕ್ತಪಡಿಸಿದರು.

ವರದಿ- ನಿಂಪು ಸುರೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.