ಸರ್ಕಾರದ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಿ -ಸಚಿವ ವೆಂಕಟೇಶ್

ಕೊಳ್ಳೇಗಾಲ:ನಮ್ಮ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಗುಣಮಟ್ಟದ ಕಾಲೇಜು ಕೊಠಡಿ ನಿರ್ಮಾಣ,ಕಲಿಕಾ ಸಾಮಗ್ರಿಗಳು, ಸುಸಜ್ಜಿತ ಹಾಸ್ಟೆಲ್ ನಿರ್ಮಾಣ ಸೌಲಭ್ಯಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಹೆಚ್ಚಿನ ರೀತಿಯಲ್ಲಿ ಜನ ಸದ್ಬಳಕೆ ಮಾಡಿಕೊಂಡು, ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸಬೇಕು ಎಂದು ಸಚಿವ ವೆಂಕಟೇಶ್ ಸಲಹೆ ನೀಡಿದರು.

ತಾಲೂಕಿನ ಕುಂತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಲಕವಾಡಿ ಗ್ರಾಮದಲ್ಲಿ, ನೂತನವಾಗಿ ನಿರ್ಮಾಣಗೊಂಡಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಬಾಲಕರ ವಿದ್ಯಾರ್ಥಿ ನಿಲಯವನ್ನು ರೇಷ್ಮೆ ಮತ್ತು ಪಶು ಸಂಗೋಪನ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ವೆಂಕಟೇಶ್ ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿರವರು ಉದ್ಘಾತಟಿಸಿದರು.

ಬಳಿಕ ಮಾತನಾಡಿದ ಸಚಿವರು, 2013ರ ವೇಳೆ ಸಿದ್ದರಾಮಯ್ಯ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ಶಾಸಕರಾಗಿದ್ದ ಜಯಣ್ಣರವರ ಅವಧಿಯಲ್ಲಿ ಚಿಲಕವಾಡಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗೆಂದು 8 ಕೋಟಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ ನಿರ್ಮಾಣ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿತ್ತು. ಮತ್ತು ನಮ್ಮ ಈ ಅವಧಿಯಲ್ಲಿ ಕ್ಷೇತ್ರದ ಶಾಸಕರಾದ ಎಆರ್ ಕೃಷ್ಣಮೂರ್ತಿರವರು ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಕೆ ಸುಧಾಕರ್ ರವರಿಂದ, ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಅನುದಾನ ತಂದು ಇನ್ನಿತರ ವಿಭಾಗಗಳಿಗೆ ಅನುಕೂಲವಾಗಲೆಂದು ಅನುದಾನ ಬಿಡುಗಡೆಗೊಳಿಸಿ, ಕಟ್ಟಡ ವಹಿಸಿದ್ದರು. ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿಂದು, ಕ್ಷೇತ್ರದ ಜನಪ್ರಿಯ ಶಾಸಕರು ಕಳೆದ ವರ್ಷವಷ್ಟೇ ಉನ್ನತ ಶಿಕ್ಷಣ ಇಲಾಖೆಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಮೂರು ಕೋಟಿ ಅನುದಾನ ತಂದು ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ನಿರ್ಮಾಣ ಅತೀ ವೇಗವಾಗಿ ಕಟ್ಟಡ ಕಾಮಗರಿಯನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕ್ಷೇತ್ರದ ಶಾಸಕ ಎಆರ್ ಕೃಷ್ಣಮೂರ್ತಿರವರು ಜನರ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿದ್ದಾರೆ ಎಂದರು.

ವರದಿ: ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.