ಕೊಳ್ಳೇಗಾಲ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ ಯುವ ಮುಖಂಡನ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ಮಂಗಳವಾರ ಸಾಯಂಕಾಲ ನಡೆದಿದೆ.

ಇದೇ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಸುನೀಲ್ ಚಾಕು ಇರಿತಕ್ಕೆ ಒಳಗಾದವರು. ತೀರ್ವ ರಕ್ತಸ್ರಾವ ದಿಂದ ಗಾಯಗೊಂಡಿರುವ ಸುನೀಲ್ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುನೀಲ್ ಮೇಲೆ ಚಾಕು ಇರಿದಿರುವ ವ್ಯಕ್ತಿ ತೇರಂಬಳ್ಳಿ ಗ್ರಾಮದ ರಾಜಣ್ಣ ಎಂಬುದಾಗಿ ತಿಳಿದು ಬಂದಿದೆ. ಈತನ ಮೇಲೆ ಅಗರ-ಮಾಂಬಳ್ಳಿಯಲ್ಲಿ ದೂರು ದಾಖಲಾಗಿದೆ. ಆರೋಪಿ ರಾಜಣ್ಣ ಇನ್ನೂ ಪೋಲೀಸರ ಕೈಗೆ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.

ವರದಿ: ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.