ಕೊಳ್ಳೇಗಾಲ. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಪಟ್ಟಣದ ನ್ಯಾಷನಲ್ ಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸಾಹಿತಿಗಳು ಮಲ್ಕುಂಡಿ ಮಹದೇವಸ್ವಾಮಿ ಅವರು ಮಾತನಾಡಿದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕುರಿತು ಕುರಿತು ನಡೆದ ಸ್ಪರ್ಧೆಯಲ್ಲಿ ಆಯ್ಕೆಯಾದ 18 ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.

ಇದಕ್ಕು ಮುನ್ನ ತಾಲ್ಲೂಕು ಕಚೇರಿಯಲ್ಲಿ ಮುಂಭಾಗದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಬೆಳ್ಳಿರಥಯಾತ್ರೆಗೆ ಉಪವಿಭಾಗ ಅಧಿಕಾರಿ ದಿನೇಶ್ ಕುಮಾರ್ ಮೀನಾ ಅವರು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಚಂದ್ರು, ತಾಲ್ಲೂಕು ಅಧ್ಯಕ್ಷರು ರಾಜೇಂದ್ರ, ತಹಶಿಲ್ದಾರ್ ಬಸವರಾಜು, ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ,ಸೆಸ್ಕಾಂ ಎಇಇ ಎಂ.ರಾಜು, ಮಂಜುಳಾ, ಪರಿಶಿಷ್ಟ ಪಂಗಡ ಕಲ್ಯಾಣಾದಿಕಾರಿ ರಾಜೇಶ್, ನಗರಸಭೆ ಮಾಜಿ ಅಧ್ಯಕ್ಷರು ರೇಖಾ ಹಾಗೂ ಇತರರು ಇದ್ದರು.

ವರದಿ: ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.