ಕೊಳ್ಳೇಗಾಲ. ಇಲ್ಲಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಂಗಸ್ವಾಮಿರವರು ನಂಜನಗೂಡು ತಾಲ್ಲೂಕಿನ ಹದಿನಾರು ಶಾಲೆ ವರ್ಗಾವಣೆಯಾದ ಹಿನ್ನೆಲೆ ಸನ್ಮಾನಿಸಿ ಬಿಳ್ಕೋಡುಗೆ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಂಗಸ್ವಾಮಿ, ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ಕಳೆದ 6 ವರ್ಷಗಳಿಂದ ಎಲ್ಲಾರ ಸಹಕಾರದಿಂದ ನಾನು ಉತ್ತಮ ಸೇವೆ ಸಲ್ಲಿಸಿದ್ದೇವೆ. ಮತ್ತೊಮ್ಮೆ ಅವಕಾಶ ಸಿಕ್ಕಲ್ಲಿ ಚಾ.ನಗರ ಜಿಲ್ಲೆಯಲ್ಲಿ ಸೇವೆ ಮಾಡಲು ಸಿದ್ಧನಾಗಿದ್ದೇನೆ ಎಂದು ತಿಳಿಸಿದರು.
ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಇಂದು ಸನ್ಮಾನಿಸಿ ಅಭಿನಂದಿಸಲಾಯಿತು.
ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿಇಒ ಮಂಜುಳಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಜೋಸೆಫ್ ಅಲೆಕ್ಸಾಂಡರ್, ಕಾರ್ಯದರ್ಶಿ ಚಿಕ್ಕರಾಜು, ರಾಜಣ್ಣ ಹಾಗೂ ಇತರರು ಇದ್ದರು.
- ನಿಂಪುವಾರ್ತೆ
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.