ಭೀಮನ ಅಮಾವಾಸ್ಯೆ ಮಾದಪ್ಪನ ಪೂಜೆಗೆ ಬಂದ ಜನಸಾಗರ
ಹನೂರು: ಭೀಮನ ಅಮಾವಾಸ್ಯೆಯ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ
ಗೋಪುರ ಹಾಗೂ ದೇವಾಲಯದ ಹೊರಾಂಗಣ ಒಳಾಂಗಣ, ಮುಖ್ಯ ರಸ್ತೆ ಗಳಲ್ಲಿ ಕಣ್ಮನ ಸೆಳೆಯುವಂತಹ ವಿದ್ಯುತ್ ದೀಪಗಳಿಂದ ಅಲಂಕಾರವನ್ನು ಮಾಡಲಾಗಿತ್ತು. ಭಕ್ತರು ಜಗಮಗಿಸುವಂತಹ ವಿದ್ಯುತ್ ಅಲಂಕಾರ ನೋಡಿ ಕಯ್ತುಂಬಿಕೊಂಡಿರು.
ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಪುರಸ್ಕಾರ, ಉತ್ಸವಾದಿಗಳು ಸಂಪ್ರದಾಯದಂತೆ ಬುಧವಾರ ಜರುಗಿದವು.
ಭೀಮನ ಅಮಾವಾಸ್ಯೆ ಪ್ರಯುಕ್ತ ಬುಧವಾರ ಬೆಳಗ್ಗೆಯಿಂದಲೇ ಮಲೆ ಮಹದೇಶ್ವರ ಸ್ವಾಮಿ ಮೂರ್ತಿಗೆ ಎಳನೀರಿನ ಅಭಿಷೇಕ, ಹಾಲು, ಪಂಚಾಮೃತ ಅಭಿಷೇಕ ನೆರವೇರಿತು. ನೈವೇದ್ಯ ಅರ್ಪಿಸಿದ ಬಳಿಕ ಮಹಾ ಮಂಗಳಾರತಿ ಮಾಡಲಾಯಿತು.
ರಥೋತ್ಸವದಲ್ಲಿ ಭಾಗಿಯಾದ ಭಕ್ತರು : ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ ಸಾವಿರಾರು ಭಕ್ತರು ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸವ ವಾಹನ, ಹುಲಿ ವಾಹನ ರುದ್ರಾಕ್ಷಿ ಮಂಟಪ ಸೇವೆಗಳನ್ನು ಮಾಡುವ ಮೂಲಕ ತಮ್ಮ ಹರಕೆಯನ್ನು ಸಲ್ಲಿಸಿ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾದರು.
ಬೆಂಗಳೂರು, ರಾಮನಗರ, ಕನಕಪುರ, ಮೈಸೂರು, ಮಂಡ್ಯ, ಚಾಮರಾಜನಗರ, ನಂಜನಗೂಡು, ತುಮಕೂರು,
ಹಾಗೂ ನಮ್ಮ ರಾಜ್ಯ ಗಡಿ ಹಂಚಿಕೊಂಡಿರುವ ತಮಿಳುನಾಡು ರಾಜ್ಯದ ವಿವಿಧ ಗ್ರಾಮಗಳಿಂದ ಜನರು ಆಗಮಿಸಿ ದೇವರ ದರ್ಶನ ಪಡೆದರು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜಗೋಪುರದ ಮುಖ್ಯ ದ್ವಾರದಲ್ಲಿ ನೇರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಭೀಮನ ಅಮಾವಾಸ್ಯೆ ಪೂಜೆ ಬಳಿಕ ಶ್ರಾವಣ ಮಾಸದ ಕುಂಭಾಭಿಷೇಕ ನೆರವೇರುತ್ತಿದ್ದ ವೇಳೆ ಲಕ್ಷಾಂತರ ಜನರು ಒಮ್ಮೆಲೆ ಆಗಮಿಸುತ್ತಿದ್ದರಿಂದ ನಿಯಂತ್ರಣ ಮಾಡಲು ಪ್ರಾಧಿಕಾರದ ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಡಬೇಕಾಯಿತು. ವಿವಿಧ ಪುಷ್ಪಗಳಿಂದ ಶೃಂಗಾರಗೊಂಡ ದೇವಾಲಯ:
ಭೀಮನ ಅಮಾವಾಸ್ಯೆ ಪ್ರಯುಕ್ತ ಗರ್ಭಗುಡಿ ಹಾಗೂ ದೇಗುಲದ ಒಳಾಂಗಣವನ್ನು ಹೋರಾಂಗಣವನ್ನು ವಿವಿಧ ಪುಷ್ಪಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು. ದೇಗುಲದ ಸುತ್ತಲೂ ವಿವಿಧ ಹೂಗಳಿಂದ ಸಿಂಗಾರ ಮಾಡಲಾಗಿತ್ತು.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ವರದಿ ನೂರುಲ್ಲಾ ಕೌದಳ್ಳಿ
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.