ಹನೂರು : ಕರ್ನಾಟಕ - ತಮಿಳುನಾಡು ಗಡಿ ಹಂಚಿಕೊಂಡಿರುವ ಪಾಲಾರ್ ಹಾಗೂ ಗೋಪಿನಾಥಂ ಹಾಡಿಗಳಿಗೆ ಭೇಟಿ ನೀಡುವ ಸಲುವಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್ ರವರಿಗೆ ಕೌದಳ್ಳಿಯಲ್ಲಿ ರಾಮಾಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕರು ಹಾಗೂ ಯುವ ದಲಿತ ನಾಯಕರಾದ ಗುರುದೇವ್ ಸಮ್ಮಾನ ಮಾಡಿದ್ದರು. ಹಾಗೂ ಪಾಲಾರ್ ಗ್ರಾಮಕ್ಕೆ ಮೂಲ ಸೌಕರ್ಯಗಳಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಯಿತು.
ಸರ್ಕಾರದಿಂದ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ ಎದುರಾಗಿರುವ ತೊಡಕುಗಳ ಕುರಿತು ಸ್ಥಳದಲ್ಲೇ ಸುದೀರ್ಘ ಚರ್ಚೆ ನಡೆಸಿ, ಹಾಡಿಯ ನಿವಾಸಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತಕ್ಷಣವೇ ಸಮಸ್ಯೆ ಬಗೆಹರಿಸಲು ಹಾಗೂ ನಿರ್ಮಾಣ ಕಾಮಗಾರಿಯನ್ನು ಸುಗಮವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು
ವರದಿ- ನೂರುಲ್ಲಾ ಕೌದಳ್ಳಿ
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.