ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೂತನ ಅಧ್ಯಕ್ಷರಾಗಿ ಡಿ. ಕೆಂಪಯ್ಯ ನೇಮಕ
ಕೊಳ್ಳೇಗಾಲ 21: ಎ.ಐ.ಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಮಾನ್ಯ ಅಧ್ಯಕ್ಷರಾದ ಡಾ. ಅಭಿಷೇಕ್ ಮನು ಸಿಂಘ್ವಿ ಅವರ ಆದೇಶದ ಮೇರೆಗೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೂತನ ಅಧ್ಯಕ್ಷರಾಗಿ ಕೊಳ್ಳೇಗಾಲ ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿಗಳಾದ ಸಿಲ್ಕಲ್ ಪುರ ಗ್ರಾಮದ ಶ್ರೀ ಡಿ. ಕೆಂಪಯ್ಯ ಅವರನ್ನು ನೇಮಕ ಮಾಡಲಾಗಿದೆ.
ಈ ನೇಮಕಾತಿಯು ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ನಿರೀಕ್ಷೆ ಮೂಡಿಸಿದ್ದು, ಕಾನೂನು, ಮಾನವ ಹಕ್ಕುಗಳು ಹಾಗೂ ಮಾಹಿತಿ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕರ ಹಕ್ಕುಗಳ ರಕ್ಷಣೆಗೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.
ನೂತನ ಜವಾಬ್ದಾರಿ ವಹಿಸಿಕೊಂಡಿರುವ ಶ್ರೀ ಡಿ. ಕೆಂಪಯ್ಯ ಅವರು ಮಾತನಾಡಿ ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸುವುದು, ಸಂಘಟನೆಯನ್ನು ತಳಮಟ್ಟದಲ್ಲಿ ಇನ್ನಷ್ಟು ಸದೃಢಗೊಳಿಸುವುದು ಹಾಗೂ ಜನಸೇವೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.
ಅವರ ನೇಮಕಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ, ಶುಭಾಶಯಗಳನ್ನು ಕೋರಿದ್ದಾರೆ .
ವರದಿ- ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.