ಕೊಳ್ಳೇಗಾಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ ತಮಿಳುನಾಡಿಗೆ ನೀರು  ಹರಿಸುವಂತೆ ಆದೇಶಿರುವುದನ್ನು ವಿರೋಧಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪದಾಧಿಕಾರಿಗಳು ಪಂಜಿನ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
ಪಟ್ಟಣದ ಗಣಪತಿ ದೇವಸ್ಥಾನದಿಂದ ಡಾ.ವಿಷ್ಣು ರಸ್ತೆ, ಡಾ.ರಾಜ್ ರಸ್ತೆ, ಡಾ.ಅಂಬೇಡ್ಕರ್ ಮೂಲಕ ಘೋಷಣೆಯೊಂದಿಗೆ ತೆರಳಿ ಡಾ.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟಿಸಿ, ಬಳಿಕ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.

ಕರವೇ ತಾಲ್ಲೂಕು ಅಧ್ಯಕ್ಷರು ಜಗದೀಶ್ ಶಾಸ್ತ್ರೀ ಮಾತನಾಡಿ, ರಾಜ್ಯದಲ್ಲಿ ಮಳೆಯಾಗದೇ ರೈತರು ಸಂಕಷ್ಟ ಎದುರುಸುತ್ತಿರುವಾಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬೀಡುವಂತೆ ಆದೇಶಿಸಿರುವುದು ನಮ್ಮ ಜನರಿಗೆ ಮರಣ ಶಾಸನವಾಗಿದೆ ಎಂದು ಖಂಡಿಸಿ, ಕಾವೇರಿ ನೀರು ನಮ್ಮ ಜನರಿಗೆ ಸೀಗುತ್ತಿಲ್ಲ. ಆದ್ದರಿಂದ ರಾಜ್ಯದ ಜನತೆಗೆ ಅನ್ಯಾಯ ಮಾಡದೇ ಕಾವೇರಿ ನೀರು ತಮಿಳುನಾಡಿಗೆ ಬೀಡಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ  ಪ್ರಧಾನ ಕಾರ್ಯದರ್ಶಿ ನಾಗರಾಜು, ಉಪಾಧ್ಯಕ್ಷರು ಪ್ರಜ್ವಲ್, ರವಿಕುಮಾರ್ ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಅಷ್ವಕ್ ಉಲ್ಲಾ, ಸಂಚಾಲಕರು ಸೈಯದ್ ಫುರಖಾನ್, ಉಸೇನ್ ಪಾಷ, ಮಾಂಬಳ್ಳಿ ಬಸವರಾಜು, ಬಾಲರಾಜು, ರಾಜು, ಶ್ರೀಧರ್ ಹಾಗೂ ಇತರರು ಇದ್ದರು.
ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.