ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ 
ಸರಹದ್ದಿನ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ಫಾರೆಸ್ಟ್ ವಾಚರ್ ಒಬ್ಬರು ಮೃತಪಟ್ಟಿದ್ದಾರೆ. 

ಮಲೆಮಹದೇಶ್ವರ ಬೆಟ್ಟದ ಹುಲಿಗೂಡು ಗ್ರಾಮದ  ಮಹದೇವಸ್ವಾಮಿ ಅಲಿಯಾಸ್ ಪಾಪಯ್ಯ (48) ಮೃತ ದುರ್ದೈವಿ. 

ಮಹದೇಶ್ವರ ಬೆಟ್ಟ ಉಪ ವಿಭಾಗದ ಮಹದೇಶ್ವರ ಬೆಟ್ಟ ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಶ್ರೀಗಂಧದ ಮರಗಳ ಕಡಿತಲೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಶನಿವಾರ ರಾತ್ರಿ ಆರೋಪಿಗಳ ಪತ್ತೆಗೆ ಸಿಬ್ಬಂದಿ ಗಸ್ತು  ಅರಣ್ಯ ವ್ಯಾಪ್ತಿಯಲ್ಲಿ ಫಾರೆಸ್ಟ್ ವಾಚರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪೊನ್ನಾಚಿ ಅರಣ್ಯ ವಲಯದ ಹುಣಸೆ ಬಯಲು ಅರಣ್ಯ ಪ್ರದೇಶದಲ್ಲಿ ಶನಿವಾರ ತಡರಾತ್ರಿ 11:30ರ ಸಮಯದಲ್ಲಿ ಆನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಮಲೆ ಮಹದೇಶ್ವರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ವರದಿ ನೂರುಲ್ಲಾ ಕೌದಳ್ಳಿ

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.