ರಾಜ್ಯದಲ್ಲಿ ಮೈತ್ರಿ ಪಕ್ಷದತ್ತ ಜನರ ಒಲವು : ಬಿ ಪುಟ್ಟಸ್ವಾಮಿ

ಕೊಳ್ಳೇಗಾಲ ಇತ್ತೀಚಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷದ 4 ಅಭ್ಯರ್ಥಿಗಳು ಗೆಲ್ಲುವ ಮೂಲಕ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ಉಂಟಾಗಿದೆ ಮುಂದಿನ ದಿನಗಳಲ್ಲಿ ಮುಂಬರುವ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಕ್ಕೆ ಮತದಾರರು ಒಲವು ತೋರಲಿದ್ದಾರೆ ಎಂಬುದರ ದಿಕ್ಸೂಚಿ ಈ ಫಲಿತಾಂಶವಾಗಿದೆ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್  ಅಧ್ಯಕ್ಷ ಬಿ ಪುಟ್ಟಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ ಒಂದೆಡೆ ಗ್ಯಾರಂಟಿ ಯೋಜನೆಗಳ ಆಮಿಷ ತೋರಿಸಿ. ಮತ್ತೊಂದೆಡೆ ದಿನನಿತ್ಯದ ಅವಶ್ಯಕ ಪದಾರ್ಥಗಳ ಮೇಲೆ ಬೆಲೆ ಏರಿಕೆ ಮಾಡಿ ಬಡಜನರ ಆರ್ಥಿಕ ವ್ಯವಸ್ಥೆ ಮೇಲೆ ಬರೆ ಎಳೆದಿದೆ ಎಂದು ಅವರು ಆರೋಪಿಸಿದ್ದಾರೆ.
ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳು ಗೆದ್ದಿರುವುದು ಮೈತ್ರಿ ಪಕ್ಷದ ಬಲವರ್ಧನೆಗೆ ಪ್ರಮುಖ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಂಘಟಿತ ಹೋರಾಟದಿಂದ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮತದಾರರಿಗೆ ತಿಳಿಸಲಾಗುವುದೆಂದು ತಿಳಿಸಿದರು.
ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ 2028ಕ್ಕೆ ಗದ್ದುಗೆ ಏರಲಿದ್ದಾರೆ ಕುಮಾರಸ್ವಾಮಿಯವರಿಂದ ಮಾತ್ರ ದಲಿತರು ಬಡವರು ರೈತರು ಮತ್ತು ಶೋಷಿತ ವರ್ಗಗಳ ಜನರ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು
ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.